ಮಕ್ಕಳಿದ್ದ ಅಂಗನವಾಡಿ ಕೇಂದ್ರದ ಮೇಲ್ಬಾವಣಿ ಕುಸಿದಿದೆ. ಅಂಗನವಾಡಿ ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಆಲ್ದರ್ತಿ ಗ್ರಾಮದ ಅಂಗನವಾಡಿಯಲ್ಲಿ ಘಟನೆ ಸಂಭವಿಸಿದೆ. ಶಾಲೆಯಲ್ಲಿ 20ಕ್ಕೂ ಹೆಚ್ಚು ಮಕ್ಕಳಿದ್ದರು. ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.

ಶಿಕ್ಷಕಿ ಮಹಾದೇವಮ್ಮಗೆ ಗಂಭೀರ ಗಾಯಗಳಾಗಿವೆ. ತಲೆ, ಕೈ, ಬೆನ್ನಿಗೆ ತೀವ್ರ ಪೆಟ್ಟಾಗಿ ಶಿಕ್ಷಕಿ ಕುಸಿದು ಬಿದ್ದಿದ್ದಾರೆ. ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.




