ಮಂಗಳೂರು: ಕಿರಿಯ ವಯಸ್ಸಿಗೆ ಸಿವಿಲ್ ನ್ಯಾಯಾಧೀಶರಾಗಿ ಕೀರ್ತಿಗೆ ಪಾತ್ರರಾದ ಅನಿಲ್ ಜಾನ್ ಸಿಕ್ವೇರಾ

Share with

ಮಂಗಳೂರು: ಬಂಟ್ವಾಳ ತಾಲೂಕಿನ ಬೋರಿಮಾರ್‌ನ ಅನಿಲ್‌ ಜಾನ್‌ ಸಿಕ್ವೇರಾ ಅವರು 2023ರ ಕರ್ನಾಟಕ ಸಿವಿಲ್‌ ನ್ಯಾಯಾಧೀಶರ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿ, 25ನೇ ವಯಸ್ಸಿನಲ್ಲಿ ಕರ್ನಾಟಕದ ಅತ್ಯಂತ ಕಿರಿಯ ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

ಸಿವಿಲ್ ನ್ಯಾಯಾಧೀಶರಾಗಿ ಕೀರ್ತಿಗೆ ಪಾತ್ರರಾದ ಅನಿಲ್ ಜಾನ್ ಸಿಕ್ವೇರಾ

ಬಂಟ್ವಾಳ ತಾಲೂಕಿನ ಬೋರಿಮಾರ್ ಮೂಲದ ಎವರೆಸ್ಟ್ ಸಿಕ್ವೇರಾ ಹಾಗೂ ಐವಿ ಸಿಕ್ವೇರಾ ಅವರ ಪುತ್ರರಾದ ಅನಿಲ್ ಜಾನ್ ಸಿಕ್ವೇರಾ ಅವರು 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದಾರೆ. ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನದಲ್ಲಿ 25ನೇ ವಯಸ್ಸಿನಲ್ಲಿ ತೇರ್ಗಡೆಯಾಗಿ ಕಿರಿಯ ಸಿವಿಲ್ ನ್ಯಾಯಾಧೀಶರಾಗಿ (ನ್ಯಾಯಾಂಗ ಮ್ಯಾಜಿಸ್ಟ್ರೇಟ್) ಆಯ್ಕೆಯಾಗಿದ್ದಾರೆ.

ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎಂ ಎಲ್‌ಎಲ್‌ಬಿ ಪದವೀಧರರಾಗಿರುವ ಅನಿಲ್ ಅವರು ಬೋರಿಮಾರ್‌ನಲ್ಲಿರುವ ಸೇಂಟ್ ಜೋಸೆಫ್ ಹೈಯರ್ ಪ್ರೈಮರಿ ಶಾಲೆಯಲ್ಲಿ ತಮ್ಮ ಶಿಕ್ಷಣವನ್ನು ಪ್ರಾರಂಭಿಸಿದರು, ನಂತರ ಪ್ರೌಢಶಾಲಾ ಅಧ್ಯಯನವನ್ನು ಮಾಣಿ ಕರ್ನಾಟಕ ಹೈಸ್ಕೂಲ್ ನಲ್ಲಿ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಪುತ್ತೂರಿನ ಸೇಂಟ್ ಫಿಲೋಮಿನಾ ಪಿಯು ಕಾಲೇಜಿನಲ್ಲಿ ಪಡೆದರು.

ಮಂಗಳೂರು ವಕೀಲರ ಸಂಘದ ಸಕ್ರಿಯ ಸದಸ್ಯರಾಗಿದ್ದ ಅನಿಲ್‌ ಅವರು ಕಾನೂನು ವೃತ್ತಿಪರರಾದ ದೀಪಕ್ ಡಿಸೋಜಾ ಮತ್ತು ನವೀನ್ ಎಸ್ ಪೈಸ್ ಅವರೊಂದಿಗೆ ಸಿವಿಲ್ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದಾರೆ. ಅನಿಲ್ ಸಿಕ್ವೇರಾ ಅವರು 2022ರಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಐಸಿವೈಎಂ (ಇಂಡಿಯನ್ ಕ್ಯಾಥೋಲಿಕ್ ಯೂತ್ ಮೂವ್ಮೆಂಟ್) ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದಾರೆ.

25ನೇ ವಯಸ್ಸಿನಲ್ಲಿ ಎರಡನೇ ಪ್ರಯತ್ನದಲ್ಲಿ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕೀರ್ತಿಗೆ ಪಾತ್ರರಾಗಿದ್ದಾರೆ.


Share with

Leave a Reply

Your email address will not be published. Required fields are marked *