
ಕಾರ್ಕಳ: ರಾಜ್ಯದಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೊಂದು ಅಪಘಾತ ಸಂಭವಿಸಿದೆ. ಬೆಳಗಾವಿಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಕಾರ್ಕಳದ ಸಾಣೂರು ರಾಮ ಮಂದಿರದ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಅನೇಕ ಪ್ರಯಾಣಿಕರೂ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ಚಾಲಕ ನಿದ್ದೆಯ ಮಂಪರಿನಲ್ಲಿದ್ದದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.




