
ಆಟೋ ಚಾಲಕನೊಬ್ಬ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿಗೆ ಆಟೋ ಚಾಲಕ ನೀರಿನಲ್ಲಿ ಮತ್ತು ಬೆರೆಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಫ್‌ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಲಾಗಿದ್ದು, ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.





