ಉಡುಪಿ: ವಂಚನೆ ಪ್ರಕರಣದಲ್ಲಿ ಬಂಧನದಲ್ಲಿರುವ ಚೈತ್ರಾ ಕುಂದಾಪುರ ಅವರ ವಿರುದ್ಧ ಮತ್ತೊಂದು ವಂಚನೆ ಪ್ರಕರಣವು ದಾಖಲಾಗಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿರುವ ಆರೋಪದಡಿ ಸಿಸಿಬಿ ಪೊಲೀಸರು ಚೈತ್ರಾ ಅವರನ್ನು ಬಂಧಿಸಿದ್ದು ಈಗಾಗಲೇ ವಿಚಾರಣೆ ನಡೆಸುತ್ತಿದ್ದಾರೆ.
ಇದೀಗ ಮತ್ತೊಂದು ವಂಚನೆ ಪ್ರಕರಣವು ಚೈತ್ರಾ ಕುಂದಾಪುರ ಅವರ ಮೇಲೆ ದಾಖಲಾಗಿದ್ದು, ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ೫ ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಸುಧೀನ್ ಎಂಬುವರು ಬ್ರಹ್ಮಾವರ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ.