ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್: ಪುಂಡರ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ

Share with

ಉಡುಪಿ: ಉಡುಪಿಯಲ್ಲಿ ಮತ್ತೊಂದು ಪುಂಡರ ಗುಂಪೊಂದು ಅಟ್ಟಹಾಸ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆ ಜೂನ್ 15ರ ರಾತ್ರಿ ನಡೆದಿದೆ ಎನ್ನಲಾಗಿದೆ. ಪುತ್ತೂರಿನ ಸೆಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದಿದ್ದನು. ಈ ವಿಚಾರ ತಿಳಿದ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್ನನ್ನು ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಕರೆದಿದ್ದರು.
ಚರಣ್ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಆಗಮಿಸಿದ್ದನು. ಈ ಸಂದರ್ಭದಲ್ಲಿ ಪ್ರವೀಣ್ ಆ್ಯಂಡ್ ಟೀಂ ಏಕಾಏಕಿಯಾಗೊ ತಲವಾರು ಬೀಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದಕ್ಕೆ ಪ್ರವೀಣ್ ಮತ್ತು ಆತನ ಟೀಂ ಆತನ ಬೈಕ್ ಮೇಲೆ ತಲವಾರಿನಿಂದ ಹಾನಿ ಮಾಡಿದ್ದಾರೆ. ಪುಂಡರು ತಾವು ಕೃತ್ಯವೆಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳು ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಪ್ರಕರಣ ವರದಿಯಾಗಿದೆ. ಹೆಚ್ಚುತ್ತಿರುವ ಗ್ಯಾಂಗ್ ವಾರ್ನಿಂದ ಉಡುಪಿ ನಗರದ ಜನತೆ ಭಯ ಭೀತರಾಗಿದ್ದಾರೆ.
ಮೇ 18 ರಂದು ನಡೆದಿತ್ತು ಭಯಾನಕ ಗ್ಯಾಂಗ್ ವಾರ್:
ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ 2 ಗಂಟೆಯ ಹೊತ್ತಿಗೆ ಕುಂಜಿಬೆಟ್ಟು ರಸ್ತೆಯಲ್ಲಿ ಟೀಂ ಗರುಡ ಎರಡು ತಂಡಗಳು ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ಅಲ್ಲದೆ ತಲವಾರು ಹಿಡಿದು, ಬಡಿದಾಡಿಕೊಂಡಿದ್ದವು. ನಗರವೆಲ್ಲ ಸೈಲೆಂಟ್‌ ಆಗಿರುವ ಹೊತ್ತಿಗೆ ಕಾರುಗಳ ಗುದ್ದಾಟ, ತಲವಾರು ಹಿಡಿದು ಬಡಿದಾಡುತ್ತಿರುವುದನ್ನು ಸುತ್ತಲಿನ ಫ್ಲ್ಯಾಟ್‌ ನಿವಾಸಿಗಳು ಕಂಡು ಬೆಚ್ಚಿಬಿದ್ದಿದ್ದರು


Share with

Leave a Reply

Your email address will not be published. Required fields are marked *