ಮಂಗಳೂರು : ಬಜಪೆ ಮೂಡು ಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ, ನೀರುಮಾರ್ಗದ ಪ್ಯಾರಾಮೆಡಿಕಲ್, ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ನಿತೇಶ್ ಬೆಲ್ಚಡ (19) ನಾಪತ್ತೆಯಾಗಿದ್ದಾರೆ.
ಆತ ಎಲ್ಲಿಗೆ ಹೋಗಿದ್ದಾನೆ ಎಂಬ ಸುಳಿವು ಸಿಕ್ಕಿಲ್ಲ. ಇದೀಗ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ವಿಶೇಷ ತಂಡ ರಚಿಸಿ ನಾಪತ್ತೆಯಾಗಿರುವ ವಿದ್ಯಾರ್ಥಿಯನ್ನು ಪತ್ತೆ ಮಾಡುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ನಿತೇಶ್ ಫೆ. 13 ರಂದು ಮನೆಯಲ್ಲಿ ಮನೆಗೆ ಬಂದು ಯಾರಿಗೂ ಹೇಳದೆ ಹೊರಗೆ ಹೋಗಿದ್ದು, ವಾಪಸು ಮನೆಗೆ ಬಂದಿಲ್ಲ. 5.5 ಅಡಿ ಎತ್ತರ, ಗೋ ಧಿ ಮೈಬಣ್ಣ, ಸಾಧಾರಣ ಶರೀರ. ನಾಪತ್ತೆಯಾದ ದಿನ ಕೆಂಪು ಬಣ್ಣದ ಟೀ ಶರ್ಟ್, ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.