ಕಾಂಗ್ರೆಸ್ ನಿಂದ ಹಿಂದೂ ವಿರೋಧಿ ಧೋರಣೆ : ಬ್ರಿಜೇಶ್ ಚೌಟ

Share with

ಮಂಗಳೂರು: ಉಡುಪಿ ಪರ್ಯಾಯ ಉತ್ಸವದಲ್ಲಿ ಜಿಲ್ಲಾಧಿಕಾರಿಯವರು ಸಾಂಪ್ರದಾಯಿಕವಾಗಿ ಭಗವಾಧ್ವಜ ಹಾರಾಡಿಸಿರುವುದನ್ನು ವಿರೋಧಿಸಿರುವುದು ಕಾಂಗ್ರೆಸ್‌ನವರ ಹಿಂದೂ ವಿರೋಧಿ ಮಾನಸಿಕತೆಗೆ ಸಾಕ್ಷಿ ಎಂದು ಸಂಸದ ಕ್ಯಾ | ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಅನಂತರ ಮತೀಯ ಹಾಗೂ ಮೂಲಭೂತವಾದಿಗಳನ್ನು ಓಲೈಸುವುದಕ್ಕಾಗಿ ಹಿಂದೂ ಸಮಾಜವನ್ನು ಪದೇಪದೆ ಗುರಿಯಾಗಿಸುತ್ತಿದೆ. ವಿಧಾನಸೌಧದಲ್ಲೇ ಪಾಕಿಸ್ಥಾನದ ಪರ ಘೋಷಣೆ ಕೂಗಿ ದೇಶದ್ರೋಹ ಕೃತ್ಯ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಹಲವು ಕಡೆ ಪಾಕಿಸ್ಥಾನದ ಧ್ವಜ ಹಾರಾಡಿಸಿದಾಗ ಕಾಂಗ್ರೆಸ್‌ನವರು ಎಲ್ಲಿ ಹೋಗಿದ್ದರು. ಭಗವಾಧ್ವಜ ಶೌರ್ಯ, ಜ್ಞಾನ, ತ್ಯಾಗದ ಪ್ರತೀಕ; ಸೇವೆ, ಸಂಸ್ಕೃತಿ, ಭಕ್ತಿಯ ದ್ಯೋತಕ. ದೇವಸ್ಥಾನ, ಧಾರ್ಮಿಕ ಉತ್ಸವಗಳಲ್ಲಿ ಭಗವಾಧ್ವಜ ಹಾರಿಸುವುದು ಹಿಂದೂಗಳ ಹಕ್ಕು ಎಂದು ಅವರು ಹೇಳಿದ್ದಾರೆ.


Share with

Leave a Reply

Your email address will not be published. Required fields are marked *