ತಿರುವನಂತಪುರಂ: ಸೆ 1: ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ 31 ವರ್ಷದ ಖ್ಯಾತ ನಟಿ ಅಪರ್ಣಾ ಪಿ.ನಾಯರ್ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.
ನಟಿ ಅಪರ್ಣಾ ನಾಯರ್ ಅವರ ಹಠಾತ್ ನಿಧನ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದಂತಾಗಿದೆ. ಅಲ್ಲದೆ ಇವರ ಅಭಿಮಾನಿ ಬಳಗಕ್ಕೆ ನಟಿ ಮೃತಪಟ್ಟಿರುವ ವಿಚಾರ ಅರಗಿಸಿಕೊಳ್ಳಲು ಆಗದಂತಾಗಿದೆ.
ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲವಾಗಿದ್ದು ತಾವು ಗುರುವಾರ ಸಂಜೆ ಇನ್ಸಾಗ್ರಾಮ್ ನಲ್ಲಿ ಕೆಲವು ಪೋಸ್ಟ್ ಗಳನ್ನು ಹಾಕಿದ್ದು ಇದರಲ್ಲಿ ಆಕೆ ಮಾನಸಿಕ ಸಮಸ್ಯೆಗೆ ತುತ್ತಾಗಿದ್ದಾರೆ ಎನ್ನಲಾಗಿದ್ದು ಅಲ್ಲದೆ ಕೊನೆಯದಾಗಿ ತನ್ನ ಮಗಳ ಫೋಟೋ ವನ್ನು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.
ಮೇಘತೀರ್ಥಂ, ಮುದ್ದುಗೌವ್, ಅಚಾಯನ್ಸ್ ಕೊಡತಿ ಸಮಕ್ಷಂ ಬಾಲನ್ ವಕೀಲ್, ಕಲ್ಕಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಪರ್ಣಾ ನಟಿಸಿದ್ದಾರೆ. ಚಂದನಮಜ, ಆತ್ಮಸಖಿ ಸೇರಿದಂತೆ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಅವರು ತ್ರಯಾ ಮತ್ತು ಕೃತಿಕಾ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.