ಆರ್ಟ್ ಗ್ಯಾಲರಿ ಮಾಲಕರ ಶವ ಕೆರೆಯಲ್ಲಿ ಪತ್ತೆ!

Share with

ಆರ್ಟ್ ಗ್ಯಾಲರಿ ಮಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿರುವ ಬಗ್ಗೆ ವರದಿಯಾಗಿದೆ.

ಬಂಟ್ವಾಳ: ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕನ ಶವ ಕೆರೆಯಲ್ಲಿ ಪತ್ತೆಯಾಗಿದೆ.

ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್.ಐ.ಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.

ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್ ಹಾಗೂ ಚಪ್ಪಲಿಯನ್ನು ನೋಡಿದ ಸ್ಥಳೀಯರು ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಪ್ರಥಮ ನೋಟದಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದರೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿಯಬೇಕಷ್ಟೆ.


Share with

Leave a Reply

Your email address will not be published. Required fields are marked *