ಅರುಣ್ ಕುಮಾರ್ ಕರಡಿಗಾಲ ಅವರಿಗೆ ಒಲಿದ ರಾಜ್ಯಮಟ್ಟದ ಪ್ರಶಸ್ತಿ

Share with

ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗಾಲ ಗ್ರಾಮದವರಾದ ಅರುಣ್ ಗೌಡ ಕರಡಿಗಾಲ ಅವರು ಸಾಹಿತ್ಯ, ಪತ್ರಿಕೋದ್ಯಮ, ಸಿನಿಮಾ ಹಾಗೂ ಸಮಾಜಸೇವಾ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಹೊಯ್ಸಳ ಸಾಂಸ್ಕೃತಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈ ಗೌರವವು ಕರಡಿಗಾಲ ಗ್ರಾಮ ಸೇರಿದಂತೆ ಸಕಲೇಶಪುರ ತಾಲ್ಲೂಕಿನ ಜನರಲ್ಲಿ ಸಂತಸ ಮತ್ತು ಹೆಮ್ಮೆಯನ್ನು ಮೂಡಿಸಿದೆ.ಮಾಣಿಕ್ಯ ಪ್ರಕಾಶನದ 11ನೇ ವಾರ್ಷಿಕ ಮಹೋತ್ಸವದ ಅಂಗವಾಗಿ ಹಾಸನದ ಸಂಸ್ಕೃತಿ ಭವನದಲ್ಲಿ ಭಾನುವಾರ ಆಯೋಜಿಸಿದ್ದ ‘ಮಾಣಿಕ್ಯ ಸಂಭ್ರಮ’ ಹಾಗೂ ರಾಜ್ಯಮಟ್ಟದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.


Share with

Tags:

Leave a Reply

Your email address will not be published. Required fields are marked *