
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತಿನ 2ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಭೇರಿ ಬಾರಿಸುವ ಮೂಲಕ ಪುತ್ತಿಲ ಪರಿವಾರದ ರಾಜಕೀಯ ಆಟ ಶುರುವಾದಂತಾಗಿದೆ.
ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499ಮತ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಭಂಡಾರಿ ಗೆಣಸಿನಕುಮೇರು140 ಮತ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಿ. ಪುರುಷೋತ್ತಮ ಪ್ರಭು ಅಬ್ಬುಗದ್ದೆ 353 ಮತ ಪಡೆದುಕೊಂಡಿದ್ದಾರೆ. 1237 ಮತದಾರರನ್ನು ಹೊಂದಿರುವ ಆರ್ಯಾಪಿನ ವಾರ್ಡ್ 2ರಲ್ಲಿ 999 ಮತ ಚಲಾವಣೆಯಾಗಿತ್ತು.