ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ಆವೃತ್ತಿಯಲ್ಲಿ ಭಾರತವು ಅತಿ ಹೆಚ್ಚು ಪದಕಗಳನ್ನು ಗೆದ್ದಿದ್ದು, ಬಿಲ್ಲುಗಾರರಾದ ಜ್ಯೋತಿ ಮತ್ತು ಓಜಾಸ್ ಅವರು ಚಿನ್ನದ ಪದಕವನ್ನು ಗೆದ್ದಿದ್ದಾರೆ.
ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ನಲ್ಲಿ ದಕ್ಷಿಣ ಕೊರಿಯಾವನ್ನು ಮಣಿಸಿದ ಭಾರತದ ಬಿಲ್ಲುಗಾರರಾದ ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಜ್ಯೋತಿ ಸುರೇಖಾ ವೆನ್ನಮ್ ಕಾಂಪೌಂಡ್ ಮಿಶ್ರ ತಂಡ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. 2018ರ ಏಶ್ಯನ್ ಗೇಮ್ಸ್ ಆವೃತ್ತಿಯಲ್ಲಿ ಭಾರತ 70 ಪದಕಗಳನ್ನು ಗೆದ್ದಿದ್ದು, ಈ ಹಿಂದೆ ಅತ್ಯುತ್ತಮ ಪದಕಗಳನ್ನು ಗೆದ್ದಿತ್ತು.