ಮಹಿಳಾ ಸೆಕ್ಯುರಿಟಿ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಆಪದ್ಬಾಂದವ ಆಸೀಫ್‌ ಅರೆಸ್ಟ್

Share with

ಮಹಿಳಾ ಸೆಕ್ಯುರಿಟಿ ಸಿಬ್ಬಂದಿ ಮೇಲೆ ಆಪದ್ಬಾಂದವ ಆಸೀಫ್‌ ಅವರು ಅನುಚಿತ ವರ್ತನೆ ತೋರಿ ಹಲ್ಲೆ.

ಮಂಗಳೂರು: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬ್ಬಂದಿ ಮೇಲೆ ಆಪದ್ಬಾಂದವ ಆಸೀಫ್‌ ಅವರು ಅನುಚಿತ ವರ್ತನೆ ತೋರಿ ಹಲ್ಲೆ ಮಾಡಿದ್ದಾರೆ ಎಂದು ದೂರು ದಾಖಲಾಗಿದ್ದು, ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಸಿಫ್ ಅವರು ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದು, ಅವರನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬ್ಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ.

ಸ್ವಲ್ಪ ಹೊತ್ತಾದರೂ ಆಂಬುಲೆನ್ಸ್ ತೆರವು ಮಾಡದ್ದಕ್ಕೆ ಮಹಿಳಾ ಸಿಬ್ಬಂದಿ ವಾಹನ ತೆಗೆಯುವಂತೆ ಹೇಳಿದ್ದು, ಆಸಿಫ್ ಮತ್ತು ಮಹಿಳಾ ಸಿಬ್ಬಂದಿ ನಡುವೆ ಮಾತಿಗೆ ಮಾತಾಗಿತ್ತು. ಈ ವೇಳೆ, ಸಿಬ್ಬಂದಿಯನ್ನು ದೂಡಿ ಕೈಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಆಸ್ಪತ್ರೆ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಆಸಿಫ್ ಅವರನ್ನು ಕರೆದೊಯ್ದಿದ್ದು, ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.


Share with

Leave a Reply

Your email address will not be published. Required fields are marked *