ವೀಕ್ಷಕವಾಣಿ: ಉತ್ತರ ಭಾರತದೆಲ್ಲೆಡೆ ವರುಣನ ಆರ್ಭಟ ಜೋರಾಗಿದ್ದು ಹಿಮಾಚಲ ಪ್ರದೇಶ, ದೆಹಲಿ ಹಾಗೂ ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸೇತುವೆಗಳು, ವಾಹನಗಳು, ಮನೆಗಳು ಕೊಚ್ಚಿ ಹೋಗಿವೆ.
ಮಳೆಗೆ ಸಿಲುಕಿ 37 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ದೆಹಲಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪಂಜಾಬ್ ಮತ್ತು ಹರಿಯಾಣದಲ್ಲೂ ಮಳೆಯ ಅಬ್ಬರ ಮುಂದುವರೆದಿದೆ.
ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ-44 ಅನ್ನು ಮುಚ್ಚಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು NS-44 ಅನ್ನು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ. ಭಾರೀ ವಾಹನಗಳಿಗೆ ಜಮ್ಮುವಿನಿಂದ ಶ್ರೀನಗರಕ್ಕೆ ಮೊಘಲ್ ರಸ್ತೆ ಮೂಲಕ ತೆರಳುವಂತೆ ಸೂಚಿಸಲಾಗಿದೆ.