ಉಪ್ಪಿನಂಗಡಿ: ಜಾಗದ ವಿಚಾರದ ತಕರಾರಿಗೆ ಸಂಬಂಧಿಸಿ ತಂಡವೊಂದು ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆ ಮತ್ತು ಗೂಂಡಾಗಿರಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ.
ಹರೀಶ ನಾಯ್ಕ, ಸುದರ್ಶನ್ ಕುಮಾರ್, ರಮಾನಂದ ಮತ್ತಿತರರು ಹಲ್ಲೆಗೊಳಗಾದವರಾಗಿದ್ದು, ಭರತ್ ಕುಮ್ಡೇಲು ಮತ್ತು ತಂಡದವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವವರ ಮೇಲಣ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.