ಉಳ್ಳಾಲ: ತಲಪಾಡಿ ಗ್ರಾಮದ ತಚ್ಚಣಿಯ ಬಳಿ ಶುಕ್ರವಾರ ಸಂಜೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ.ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿದ ಘಟನೆ ನಡೆದಿದೆ.
ಆರೋಪಿಗಳಾದ ತ್ರಿಶೂರ್ ವಡಂಕಚೇರ್ ನ ಶೇಖ್ ತನ್ಸೀರ್(20)ಹಾಗೂ ವಡೆಗೆರ ಅಂಜೇರಿಯ ಸಾಯಿಕೃಷ್ಣ(19) ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎಂಡಿಎಂಎ, ಮೊಬೈಲ್ ಫೋನ್ ಹಾಗೂ ಬೈಕ್ ಸೇರಿದಂತೆ ಸುಮಾರು 50ಸಾವಿರ ರೂಪಾಯಿ ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.