ಉಳ್ಳಾಲ: ಆಟೋ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಟೋ ರಿಕ್ಷಾ ಚಾಲಕರಾದ ಸೇವಂತಿಗುಡ್ಡೆ ನಿವಾಸಿ ಶಮೀರ್ (41) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ವಿವಾಹಿತರಾಗಿರುವ ಸಮೀರ್ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ನಡೆಸಿರುವ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.