ಬೆಳ್ತಂಗಡಿ: ಶಾಲೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಅಟೋ ರಿಕ್ಷಾ ಮಗುಚಿ ಬಿದ್ದು ವಿದ್ಯಾರ್ಥಿಗಳು ಅಪಾಯದಿಂದ ಪಾರಾದ ಘಟನೆ ಸೆ. 11 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಮೂರುಗೋಳಿ ಬಳಿ ನಡೆದಿದೆ.
ಕಲ್ಲೇರಿ ಆಸುಪಾಸಿನಿಂದ ಮೂಡಡ್ಕದ ಅಲ್ ಮದೀನತುಲ್ ಮುನವ್ವರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಅಟೋ ರಿಕ್ಷಾಕ್ಕೆ ಮೂರುಗೋಳಿ ಎಂಬಲ್ಲಿ ದ್ವಿ-ಚಕ್ರ ವಾಹನ ಅಡ್ಡ ಬಂದಿದ್ದು, ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ಮಗುಚಿ ಬಿದ್ದಿದೆ.
ಘಟನೆಯಿಂದ ರಿಕ್ಷಾದಲ್ಲಿದ್ದ ಒಂಬತ್ತು ವಿದ್ಯಾರ್ಥಿಗಳಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ವಿದ್ಯಾರ್ಥಿಗಳು ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.