ಪುತ್ತೂರು: ರಾಮಕುಂಜ ಮೂಲದ ಆಟೋ ರಿಕ್ಷಾ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಬಳಿ ಸ್ಕಿಡ್ ಆಗಿ ಪಲ್ಟಿಯಾದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ವರದಿಯಾಗಿದೆ.
ರಾಮಕುಂಜ ಗ್ರಾಮದ ಇರ್ಕಿ ನಿವಾಸಿ ಪದ್ಮಯ್ಯ ಮಡಿವಾಳ ಅವರ ಪುತ್ರ ದಿನೇಶ್ (40) ಮೃತಪಟ್ಟವರಾಗಿದ್ದು, ಅವರು ಬಜತ್ತೂರು ಕಡೆ ಬಾಡಿಗೆಗೆ ಹೋಗಿ ವಾಪಸಾಗುತ್ತಿದ್ದ ವೇಳೆ ಬಜತ್ತೂರು ಗ್ರಾಮದ ಪೆರಿಯಡ್ಕ-ಅಯೋಧ್ಯಾ ನಗರದಲ್ಲಿ ಆಟೋ ಸ್ಕಿಡ್ ಆಗಿ ಪಲ್ಟಿಯಾಗಿದೆ.
ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.