ಬಂಟ್ವಾಳ: ಸಿಬ್ಬಂದಿ ಕೊರತೆ ಮತ್ತು ಒತ್ತಡಗಳ ಹೊರತಾಗಿಯೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದು ಪ್ರತಿ ಸರ್ಕಾರಿ ನೌಕರನ ಜವಾಬ್ದಾರಿ ಎಂದು ಬಂಟ್ವಾಳ ತಹಶೀಲ್ದಾರ್ ಎಸ್ ಬಿ ಕೂಡಲಗಿ ಹೇಳಿದರು.

ಅವರು ಬಂಟ್ವಾಳ ತಾಲೂಕು ಕಚೇರಿಯ ಸಭಾಂಗಣದಲ್ಲಿ ನ.4ರಂದು ನಡೆದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಅಮಾನುಲ್ಲಾ ಮಾತನಾಡಿ ಸಾರ್ವಜನಿಕರ ಸೇವೆ ಮಾಡುವ ಅವಕಾಶವನ್ನು ಸದುಪಯೋಗಪಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಖಜಾನಾಧಿಕಾರಿ ಮಹೇಶ್, ಉಪನೊಂದಾವಣಾಧಿಕಾರಿ ಕವಿತಾ, ಭೂಮಾಪನ ಇಲಾಖೆಯ ಪರ್ಯಾವೇಕ್ಷಕರಾದ ಮರುಲಪ್ಪ, ಉಪತಹಶೀಲ್ದಾರ್ ದಿವಾಕರ ಮುಗುಳೀಯ, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ಉಪಸ್ಥಿತರಿದ್ದರು.




