ನವದೆಹಲಿ: ಪ್ರಮುಖ ಆರೋಗ್ಯ ಯೋಜನೆಯದಾ ಆಯುಷ್ಮಾನ್ ಭಾರತ್ ಯೋಜನೆ ಜಾರಿಯಾಗಿ ಬುಧವಾರಕ್ಕೆ 8 ವರ್ಷ ಪೂರ್ಣಗೊಂಡಿದೆ.
ಈವರೆಗೆ 60 ಕೋಟಿಗೂ ಹೆಚ್ಚು ಜನರು ಈ ಯೋಜನೆಯ ಪ್ರಯೋಜನವನ್ನು ಪಡೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು, 60 ಕೋಟಿಗೂ ಹೆಚ್ಚು ಫಲಾನುಭವಿಗಳು ವಾರ್ಷಿಕ 5 ಲಕ್ಷ ರೂ. ಆರೋಗ್ಯ ರಕ್ಷಣೆಯನ್ನು ಪಡೆಯುತ್ತಿದ್ದಾರೆ.
ಇದು ವಿಶ್ವದ ಅತಿದೊಡ್ಡ ಆರೋಗ್ಯ ರಕ್ಷಣಾ ಯೋಜನೆಯಾಗಿದೆ. ಇದು ವೈದ್ಯಕೀಯ ವೆಚ್ಚಗಳಲ್ಲಿ ದಾಖಲೆಯ ಉಳಿತಾಯವನ್ನು ಸಾಧ್ಯವಾಗಿಸಿದೆ, ಇದರಿಂದಾಗಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಪ್ರಯೋಜನವಾಗಿದೆ ಎಂದು ಹೇಳಿದರು. ಇದುವೆರಗೂ 48.5 ಲಕ್ಷ ಆಯುಷ್ಮಾನ್ ಕಾರ್ಡ್ಗಳನ್ನು ವಿತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ಹೇಳಿದೆ.




