ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಅವಧಿ ಇನ್ನೇನು ಪೂರ್ಣಗೊಳ್ಳಲಿರುವ ಹಿನ್ನಲೆ, ಸರ್ವೋಚ್ಛ ನ್ಯಾಯಾಲಯದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಕೇಂದ್ರ ಕಾನೂನು ಸಚಿವಾಲಯ ಇಂದು (ಏ .29) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಪ್ರಸ್ತುತ ಸುಪ್ರೀಂ ಕೋರ್ಟ್ ನ ಹಾಲಿ ಮುಖ್ಯ ನ್ಯಾಯಮೂರ್ತಿಯಾಗಿರುವ ಸಂಜೀವ್ ಖನ್ನಾ ಅವರ ಅವಧಿ ಪೂರ್ಣಗೊಂಡ ನಂತರ ಮೇ 14ರಂದು ಇವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.




