ಉಡುಪಿ: ನಾಗಾಲ್ಯಾಂಡ್ ಸೇರಿದಂತೆ ಹಲವು ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿದ್ದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ.ಆಚಾರ್ಯ) ಅವರು ನ.10 ರಂದು ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾದರು.
ತ್ರಿಪುರಾ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಅರುಣಾಚಲ ಪ್ರದೇಶದ ಗವರ್ನರ್ ಆಗಿ ಇವರು ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಡುಪಿಯವರಾದ ಇವರಿಗೆ ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ.
ಎಬಿವಿಪಿ, ಆರ್ಎಸ್ಎಸ್ನಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಪಿ.ಬಿ.ಆಚಾರ್ಯ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸಿದ್ದಾರೆ.
ಹುಟ್ಟೂರು ಉಡುಪಿ ಜತೆಗಿನ ನಂಟು ಉಳಿಸಿಕೊಂಡಿದ್ದ ಆಚಾರ್ಯರು ಉಡುಪಿಯ ಅಷ್ಠಮಠಗಳಿಗೆ ಆಗಾಗ ಭೇಟಿ ನೀಡುತ್ತಿದ್ದರು.