ಮಲ್ಪೆ: ನಾಳೆಯಿಂದ ಎರಡು ತಿಂಗಳು ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Share with

ಉಡುಪಿ: ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು, ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕೆ ನಡೆಸುವಂತಿಲ್ಲ. ಯಾಂತ್ರೀಕೃತ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿ ಮೀನುಗಾರಿಕೆಗೆ ಅನುಮತಿ ನೀಡಲಾಗಿದೆ.
ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರ ಮೇಲೆ ದಂಡ ವಿಧಿಸಲಾಗುತ್ತದೆ.ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಹಿನ್ನೆಲೆಯಲ್ಲಿ ಮಲ್ಪೆಯ ಸರ್ವ ಋತು ನಂದರಿನಲ್ಲಿ ಸಾವಿರಕ್ಕೂ ಮಿಕ್ಕಿ ಬೋಟುಗಳು ಲಂಗರು ಹಾಕಿವೆ.


Share with

Leave a Reply

Your email address will not be published. Required fields are marked *