ಉಡುಪಿ: ಗಣೇಶ ಚತುರ್ಥಿ ಪ್ರಯುಕ್ತ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕೋರಿಕೆಯಂತೆ ಉಡುಪಿ ಜಿಲ್ಲೆಯಲ್ಲಿ ಸೆ.೧೯, ಉಡುಪಿ ನಗರದಲ್ಲಿ ಸೆ.೨೧ ಮತ್ತು ಸೆ.೨೩ರಂದು ಡ್ರೈ ಡೇ ಎಂದು ಘೋಷಿಸಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.
ಕರಾವಳಿಯಾದ್ಯಂತ ಗಣೇಶ ಚತುರ್ಥಿ ಹಬ್ಬಕ್ಕೆ ಸಂಭ್ರಮದಿಂದ ಸಿದ್ಧತೆ ನಡೆಯುತ್ತಿದ್ದು, ಸೋಮವಾರ ಗೌರಿ ಹಬ್ಬ ಹಾಗೂ ಮಂಗಳವಾರ ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತದೆ.