ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳು ಸಂಚಾರ ವೇಳೆ ಸೈರನ್ ಬಳಕೆ ನಿಷೇಧಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. M.A ಸಲೀಂ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಸುರಕ್ಷತೆ ಮತ್ತು ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಸೈರನ್ ನಿಷೇಧಿಸಲಾಗಿದೆ. ಸೈರನ್ ಬಳಕೆಯಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುತ್ತದೆ. ಇದರಿಂದ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.