ಬಂಟ್ವಾಳ: ಕೊಡಂಗೆ ಶಾಲೆಯಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ

Share with

ಬಂಟ್ವಾಳ: ದ.ಕ. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಂಟ್ವಾಳ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ.

ಗುಲಾಬಿ ಆಂದೋಲನ ಕಾರ್ಯಕ್ರಮವು ಬಂಟ್ವಾಳ ತಾಲೂಕಿನ ದ.ಕ.ಜಿ.ಪ ಸರಕಾರಿ ಪ್ರಾಥಮಿಕ ಶಾಲೆ, ಕೊಡಂಗೆ ಇಲ್ಲಿ ಜರಗಿತು.

ಬಂಟ್ವಾಳ ತಾಲೂಕಿನ ದ.ಕ.ಜಿ.ಪ ಸರಕಾರಿ ಪ್ರಾಥಮಿಕ ಶಾಲೆ, ಕೊಡಂಗೆ ಇಲ್ಲಿ ಜರಗಿತು. ತಾಲೂಕು ಆರೋಗ್ಯಾಧಿಕಾರಿ ಡಾಕ್ಟರ್ ಅಶೋಕ್ ರೈ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ವಿವರವಾಗಿ ಮಕ್ಕಳಿಗೆ ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಶೃತಿ ತಂಬಾಕು ವ್ಯಸನಿಗಳು ಆಗುವುದಿಲ್ಲ ಮತ್ತು ನಮ್ಮ ಕುಟುಂಬ ವರ್ಗದವರನ್ನು ಹಾಗೂ ಸ್ನೇಹಿತರನ್ನು ಈ ದುಶ್ಚಟದಿಂದ ಹೊರ ತರಲು ಪ್ರಯತ್ನ ಮಾಡುತ್ತೇವೆ ಎಂಬ ಬಗ್ಗೆ ಮಕ್ಕಳಿಗೆ ಪ್ರತಿಜ್ಞೆ ಮಾಡಿಸಿದರು.

ಈ ಸಂದರ್ಭದಲ್ಲಿ ತಂಬಾಕು ದುಷ್ಪಟದ ಅರಿವು ಮೂಡಿಸಲು ಜಾತ ನಡೆಸಲಾಯಿತು ಹಾಗೂ ಸುತ್ತಮುತ್ತಲಿನ ಅಂಗಡಿಗಳಿಗೆ ತೆರಲಿ ಗುಲಾಬಿ ಹೂ ನೀಡಿ ತಂಬಾಕು ವಸ್ತುಗಳನ್ನು ಮಾರಾಟ ಮಾಡದಂತೆ ಅಂಗಡಿ ಮಾಲಕರಿಗೆ ಮನವರಿಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವಿನಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಾಧ, ಆರೋಗ್ಯ ನಿರೀಕ್ಷಣಾಧಿಕಾರಿ ರಾಕೇಶ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸೌಮ್ಯ, ಆಶಾ ಕಾರ್ಯಕರ್ತೆ ಸರಸ್ವತಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ ಸುಜಾತ, ಶಾಲಾ ಮುಖ್ಯ ಶಿಕ್ಷಕಿ ಸುಗುಣ ಮತ್ತು ಎಲ್ಲಾ ಶಿಕ್ಷಕರು, ಶಾಲಾಭಿವೃದ್ಧಿ ಸದಸ್ಯರಾದ ಅಬ್ದುಲ್ ಜಲೀಲ್ ಭಾಗವಹಿಸಿದರು.


Share with

Leave a Reply

Your email address will not be published. Required fields are marked *