ಬಂಟ್ವಾಳ : ನರಿಕೊಂಬು ಗ್ರಾಮದ ದ, ಕ. ಜಿ. ಪಂ.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೋಭಾ ಅವರನ್ನು 2024-25 ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಶಾಲಾ ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳ ಜೊತೆಗೆ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪಠ್ಯೇತರ ಚಟುವಟಿಕೆಗಳು ಹಾಗೂ ಶಾಲಾ ಭೌತಿಕ ಅಭಿವೃದ್ಧಿಗೆ ತೊಡಗಿಸಿಕೊಂಡು ಸಮುದಾಯದ ಜೊತೆಗೆ ಉತ್ತಮ ಬಾಂಧವ್ಯ ಹೊಂದಿರುವುದನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ.
ಸೆಪ್ಟೆಂಬರ್ 5 ರಂದು
ಬಂಟರ ಭವನದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.