ಬಂಟ್ವಾಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Share with

ಬಂಟ್ವಾಳ: ನ.1ರಂದು ನಡೆದ ಬಂಟ್ವಾಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ತಹಶೀಲ್ದಾರ್ ಎಸ್.ಬಿ ಕೂಡಲಗಿ ಅವರು ಕರ್ನಾಟಕದ ನೆಲ, ಜಲ ಸಂರಕ್ಷಣೆಗೆ ಹಾಗೂ ನಾಡ ಭಾಷಾ ಉಳಿವಿಗೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಮೊದಲು ತಹಶೀಲ್ದಾರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಿತು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಗೋಪಾಲಕೃಷ್ಣ ನೇರಳೆಕಟ್ಟೆ ಅವರು ದಿಕ್ಸೂಚಿ ಭಾಷಣ ಮಾಡಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಬಂಟ್ವಾಳ ನಗರ ಪೊಲೀಸ್ ಠಾಣೆ ನಿರೀಕ್ಷಕ ಅನಂತಪದ್ಮನಾಭ ಅವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ತಹಶೀಲ್ದಾರ್ ಎಸ್.ಬಿ ಕೂಡಲಗಿ.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಮೊದಲು ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಕರ್ನಾಟಕ ಏಕೀಕರಣ ಕುರಿತು ಮಾತನಾಡಿ, ಸ್ವಾಗತಿಸಿದರು. ಹಿರಿಯ ಕಲಾವಿದ ಮಂಜು ವಿಟ್ಲ ಅವರಿಗೆ ನುಡಿನಮನವನ್ನು ತಾಲೂಕು ಕಚೇರಿ ಸಿಬ್ಬಂದಿ ಶ್ರೀಕಲಾ ಕಾರಂತ ಅವರು ಸಲ್ಲಿಸಿದರು. ಉಪ ತಹಶೀಲ್ದಾರ್ ನವೀನ್ ಬೆಂಜನಪದವು ಅವರು ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಮೊದಲು ತಹಶೀಲ್ದಾರ್ ನೇತೃತ್ವದಲ್ಲಿ ಧ್ವಜಾರೋಹಣ, ಪೊಲೀಸ್, ಎನ್.ಸಿ.ಸಿ. ಸ್ಕೌಟ್ಸ್ ಮತ್ತು ಬಿ.ಮೂಡ ಹೈಸ್ಕೂಲ್, ಎಸ್.ಎಲ್.ಎನ್.ಪಿ. ವಿದ್ಯಾಲಯ ಸಹಿತ ನಾನಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.


Share with

Leave a Reply

Your email address will not be published. Required fields are marked *