ಮಂಗಳೂರಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟ

Share with

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಹಾಗೂ ತುಂಬೆ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 2023–24ರ ಬಂಟ್ವಾಳ ತಾಲೂಕು ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಜರಗಿತು.

ಬಂಟ್ವಾಳ ತಾಲೂಕು ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಜರಗಿತು.

ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಅವರು ಗೆಲುವು ಎನ್ನುವುದು ಎಲ್ಲರಿಂದಲೂ ಸಾಧ್ಯವಾಗುದಿಲ್ಲ, ಅದಕ್ಕೆ ಪ್ರಯತ್ನ ಬಹಳ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮ ವಹಿಸಬೇಕಾಗುವುದು ಅಗತ್ಯವಾಗುತ್ತದೆ ಎಂಬುದಾಗಿ ಹೇಳಿದರು.

ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್.

ಬಂಟ್ವಾಳ ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣಕ್ಕಾಗಿ ಒಂದು ನೂರು ಕೋಟಿ ರೂಪಾಯಿಗಳ ಅನುದಾನಕ್ಕಾಗಿ ‘ಕೇಲ್ ಇಂಡಿಯಾ’ಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಇದು ಶೀಘ್ರವಾಗಿ ಮಂಜೂರುಗೊಂಡು ಪ್ರಾರಂಭವಾಗುವಲ್ಲಿ ನಾನು ದೆಹಲಿಯಲ್ಲಿ ಮಾತನಾಡಿ ಪ್ರಯತ್ನಿಸುವೆ ಎಂದರು.

ಬಂಟ್ವಾಳ ತಾಲೂಕು ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಿದ್ದ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ.ಅಬ್ದುಲ್ ಸಲಾಂ ಅವರು ಮಾತನಾಡಿ ಕ್ರೀಡೆ ಎನ್ನುವುದು ಆರೋಗ್ಯಪೂರ್ಣ ಸ್ಪರ್ಧೆಯಾಗಿದ್ದು ಶಿಸ್ತು ಮತ್ತು ಸಂಯಮವನ್ನು ಕಲಿಸಿಕೊಡುತ್ತದೆ. ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ವೇದಿಕೆಯಾಗಿ ಕ್ರೀಡಾ ಕ್ಷೇತ್ರ ಸಹಕರಿಸುತ್ತದೆ ಎಂದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಅವರು ಧ್ವಜಾರೋಹಣಗೈದು ಶುಭ ಹಾರೈಸಿದರು. ತುಂಬೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೀಶ್ ಸಾಲಿಯಾನ್ ಒಲಿಂಪಿಕ್ ಧ್ವಜಾರೋಹಣ ಮಾಡಿದರು. ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಶಾಲಾ ಧ್ವಜಾರೋಹಣ ಗೈದರು. ಸಮಾರಂಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀನಿವಾಸ್ ಕೆದಿಲ ಹಾಗೂ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಲಿಲ್ಲಿ ಪಾಯಸ್ ಅವರನ್ನು ಸನ್ಮಾನಿಸಲಾಯಿತು.

ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತುಂಬೆ ಗ್ರಾಮ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ತುಂಬೆ, ತುಂಬೆ ಪಿ.ಟಿ.ಎ. ಅಧ್ಯಕ್ಷ ನಿಸಾರ್ ಅಹಮ್ಮದ್, ತಾಲೂಕು ನೌಕರರ ಸಂಘದ ಅಧ್ಯಕ್ಷ ಉಮಾನಾಥ್ ರೈ ಮೇರಾವು, ಬಿ.ಎ.ಐ.ಟಿ.ಐ ಪ್ರಾಂಶುಪಾಲ ನವೀನ್ ಕುಮಾರ್, ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷೆ ರತ್ನಾವತಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜಾಯೆಲ್, ಸ್ಕೌಟ್ಸ್–ಬಿ.ಎಂ.ತುಂಬೆ, ಸದಾಶಿವ ಡಿ.ತುಂಬೆ ಇಬ್ರಾಹಿಂ ವಳವೂರು, ಶಿಕ್ಷಣ ಸಂಯೋಜಕಿ ಕೆ.ಸುಜಾತ ಕುಮಾರಿ, ಶ್ರೀಮತಿ ಸುಧಾ, ಪದ್ಮಾವತಿ, ತುಂಬೆ ಪ್ರೌಢಶಾಲಾ ಮುಖ್ಯಸ್ಥೆ ವಿದ್ಯಾ ಕೆ., ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಮ್ ಜೆ.ನಾಯಕ್, ಅಬ್ದುಲ್ ಗಫೂರ್, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಲಿ ಎಡ್ನ ಗೊನ್ಸಾಲ್ವಿಸ್, ಪಿ.ಟಿ.ಎ ಉಪಾಧ್ಯಕ್ಷೆ ಮೋಹಿನಿ, ರಮೇಶ್ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ತುಂಬೆ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ ಅವರು ವಂದಿಸಿ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಯ ಅಧೀಕ್ಷಕರಾದ ಅಬ್ದುಲ್ ಕಬೀರ್ ಅವರು ನಿರೂಪಿಸಿದರು.


Share with

Leave a Reply

Your email address will not be published. Required fields are marked *