ಬಂಟ್ವಾಳ: ದ್ವಿ-ಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು

Share with

ಬಂಟ್ವಾಳ: ದ್ವಿ-ಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದರ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಫೆ.25 ರಂದು ಬಿ.ಸಿ ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಆಲಡ್ಕ ನಿವಾಸಿ ಆಶ್ರಫ್ (32)  ಎಂದು ಗುರುತಿಸಲಾಗಿದೆ.

ಆಲಡ್ಕ ನಿವಾಸಿ ತನ್ವೀರ್ ಅವರು ಆಶ್ರಫ್ ಅವರ ಸ್ನೇಹಿತರಾಗಿದ್ದು, ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತ ತನ್ವೀರ್ ಗೆ ಡ್ರಾಫ್ ಕೊಡುವ ಉದ್ದೇಶದಿಂದ ತನ್ನ ಸ್ಕೂಟರ್ ನಲ್ಲಿ ಬಿ.ಸಿ ರೋಡಿಗೆ ತೆರಳಿದ್ದರು. ಬೆಳಿಗ್ಗೆ ಸುಮಾರು 5.30ರ ವೇಳೆ ಆಶ್ರಫ್ ಅವರು ಕೈಕಂಬದಲ್ಲಿರುವ ತರಕಾರಿ ಅಂಗಡಿಗೆ ಇನ್ನೇನು ಸ್ನೇಹಿತ ತನ್ವೀರ್ ನನ್ನು ಇಳಿಸಬೇಕು ಎನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಖಾಲಿ ಮಾಡಿ ವಾಪಾಸು ಹೋಗುವ ಲಾರಿಯ ಚಾಲಕ ಲಾರಿಯನ್ನು ಅಜಾಗರೂಕತೆಯಿಂದ ಹಿಂಬದಿಗೆ ಚಲಿಸಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡ ಆಶ್ರಫ್ ನನ್ನು ಕೂಡಲೇ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *