ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಬೃಹತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ದಿನಾಂಕ 31.3.2024 ಭಾನುವಾರ ಮಧ್ಯಾಹ್ನ 2.30ಕ್ಕೆ ಸರಿಯಾಗಿ ಬಿ ಸಿ ರೋಡು ಸ್ಪರ್ಶ ಕಲಾ ಮಂದಿರದಲ್ಲಿ ಜರಗಲಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಚುನಾವಣೆ ಕೆಲಸದಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡುವ ದೃಷ್ಟಿಯಿಂದ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಕ್ಷೇತ್ರ ಶಾಸಕರಾದ ಶ್ರೀ ರಾಜೇಶ್ ನಾಯ್ಕ್
ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಬಿಜೆಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಮಾಜಿ ಶಾಸಕರು ರಾಜ್ಯ ಜಿಲ್ಲಾ ಮಟ್ಟದ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಆದುದರಿಂದ ಪ್ರತಿ ಬೂತಿನಿಂದ ಕನಿಷ್ಠ 25 ಜನ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿವ ಮೂಲಕ ಈ ಸಮಾವೇಶವನ್ನು ಯಶಸ್ವಿಗೊಳಿಸಲು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಶ್ರೀ ಚೆನ್ನಪ್ಪ ಕೋಟ್ಯಾನ್ ಅವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.