ಬಂಟ್ವಾಳ: ಅಂಗಡಿಗಳಲ್ಲಿ ಸರಣಿ ಕಳ್ಳತನ ಮಾಡಿದ ಘಟನೆ ಬಿ.ಸಿ ರೋಡಿನ ಕೈಕಂಬ ಎಂಬಲ್ಲಿ ಡಿ.10ರಂದು ನಡೆದಿದೆ. ಬಿ.ಸಿ ರೋಡಿನ ಕೈಕಂಬದಲ್ಲಿ ಹಲವು ಅಂಗಡಿಗಳಿಗೆ ನುಗ್ಗಿದ ಕಳ್ಳ ಅದರಲ್ಲಿ ಮೂರು ಅಂಗಡಿಗಳಿಂದ ಸುಮಾರು 61 ಸಾವಿರ ರೂಪಾಯಿ ಕಳವು ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಡಿಶ್ ಟಿ.ವಿ ರಿಚಾರ್ಜ್ ಅಂಗಡಿಯಿಂದ ಸುಮಾರು 52 ಸಾವಿರ ನಗದು, ಸಾಯಿ ಲೀಲಾ ಹೋಟೆಲ್ ನ 6 ಸಾವಿರ ಹಾಗೂ ಮತ್ತೊಂದು ಅಂಗಡಿಯಿಂದ 3 ಸಾವಿರ ರೂಪಾಯಿ ನಗದು ಕಳವು ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಡಿ.9ರಂದು ರಾತ್ರಿ ವೇಳೆ ಭಾರಿ ಮಳೆ ಇದ್ದು, ಕಳ್ಳ ಇದೇ ಸಮಯದಲ್ಲಿ ಕಳವು ಮಾಡಿರಬೇಕು ಎಂದು ಹೇಳಲಾಗಿದೆ. ಕಳ್ಳ ಬೈಕಿನಲ್ಲಿ ಬಂದು ನಂತರ ಹೆಲ್ಮೆಟ್ ಧರಿಸಿ ಅಂಗಡಿಗಳಿಗೆ ನುಗ್ಗಿದ ದ್ರಶ್ಶ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ ಎಂದು ಹೇಳಲಾಗಿದೆ. ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.