ಬಂಟ್ವಾಳ: ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ: ಮೂವರ ಬಂಧನ

Share with

ಬಂಟ್ವಾಳ: ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಜ.2ರಂದು ಬಂಧಿಸಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂವರನ್ನು ಪೊಲೀಸರು ಬಂಧಿಸಿದ್ದಾರೆ

ಬಿ.ಸಿ.ರೋಡ್ ಬಳಿಯ ಪರ್ಲಿಯಾ ನಿವಾಸಿ ನವಾಝ್, ನಂದರಬೆಟ್ಟು ನಿವಾಸಿ ಹಾರಿಸ್ ಯಾನೆ ಆಝಾದ್ ಮತ್ತು ಜಸೀಂ ಬಂಧಿತ ಆರೋಪಿಗಳು.

ಆರೋಪಿಗಳು ಬಿ.ಸಿ.ರೋಡಿನ ಬಸ್ತಿಪಡ್ಪು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದರು. ಇದನ್ನು ಗಮನಿಸಿದ ಬಂಟ್ವಾಳ ನಗರ ಠಾಣಾಧಿಕಾರಿ ರಾಮಕೃಷ್ಣ ಹಾಗೂ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಬಳಿಕ ಅವರನ್ನು ವಿಚಾರಣೆ ನಡೆಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಮಾದಕ ವಸ್ತುಗಳನ್ನು ಸೇವಿಸಿರುವುದು ಬೆಳಕಿಗೆ ಬಂದಿದೆ. ಇನ್ನು ಪೊಲೀಸರು ಮೂವರು ಆರೋಪಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *