ಬಂಟ್ವಾಳ: ಕಡೇಶಿವಾಲಯದಲ್ಲಿ ಹದಿನೇಳನೇ ಮಕ್ಕಳ ಸಾಹಿತ್ಯ ಸಮ್ಮೇಳನ

Share with

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ದಶಂಬರ್ 6ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದ ಸಹಯೋಗದಲ್ಲಿ ಜರಗಿಸಲಿದೆ.

ಪತ್ರಿಕಾ ಗೋಷ್ಠಿಯಲ್ಲಿ ಮಕ್ಕಳ ಕಲಾ ಲೋಕದ ಪಾಧ್ಯಕ್ಷ ಶಿವರಾಮ ಭಟ್ ನೆಡ್ಲೆ, ಕಾರ್ಯದರ್ಶಿ ಪುಷ್ಪಾ ಎಚ್, ಸ್ವಾಗತ ಸಮಿತಿಯ ವಿದ್ಯಾಧರ ರೈ ಹಾಗೂ ಶರತ್ ಕುಮಾರ್ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್ ಮೆರವಣಿಗೆಯನ್ನು ಉದ್ಘಾಟಿಸುವರು. ಕಡೇಶಿವಾಲಯ ಶಾಲಾ ಏಳನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಸುವರ್ಣ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿರುತ್ತಾರೆ. ಹಿಂದಿನ ಸಮ್ಮೇಳನಾಧ್ಯಕ್ಷೆ ಓಜಾಲ ಶಾಲಾ ವಿದ್ಯಾರ್ಥಿನಿ ಕುಮಾರಿ ಶ್ರುತಿಕಾ ಬಾಕಿಮಾರು ಉದ್ಘಾಟಿಸುವರು. ಮಕ್ಕಳ ಸ್ವರಚಿತ ಕೃತಿಗಳನ್ನು ಕವಿ ವಿಶ್ವನಾಥ ಕುಲಾಲ್ ಮಿತ್ತೂರು ಬಿಡುಗಡೆಗೊಳಿಸುವರು. ಬದಿಯಡ್ಕ ಶ್ರೀ ಭಾರತಿ ವಿದ್ಯಾ ಪೀಠದ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಆರಾಧ್ಯ ರೈ ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಕುರುಂಬ್ಲಾಜೆ ಕಿಟ್ಟಣ್ಣ ಶೆಟ್ಟಿ ವಿವರಿಸಿದರು.

ಪ್ರಾಥಮಿಕದಿಂದ ಪದವಿಪೂರ್ವ ಕಾಲೇಜು ತನಕದ ಸುಮಾರಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮ್ಮೇಳನದ ವಿವಿಧ ಚಟುವಟಿಕೆಗಳಾದ ಚಿತ್ತ ಚಿತ್ತಾರ, ಕಿರುನಾಟಕ, ಸಾಹಿತ್ಯ ಸ್ವರಚನೆ, ಮಾತುಕತೆ ಮತ್ತು ಸಾಹಿತ್ಯ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಅವರೊಂದಿಗೆ ಶಿಕ್ಷಕರು ಮತ್ತು ಹೆತ್ತವರು ಭಾಗವಹಿಸಲಿದ್ದು ಒಟ್ಟು ಸಮಾರು 1500ಜನರು ಆಗಮಿಸುವ ನಿರೀಕ್ಷೆಯಿದೆ. ಸರ್ವರ ಸಹಕಾರವನ್ನು ಸ್ವಾಗತ ಸಮಿತಿ ಅಪೇಕ್ಷಿಸಿದೆ. ಗ್ರಾಮ ಪಂಚಾಯತ್, ಗ್ರಾಮದ ಸಂಘ-ಸಂಸ್ಥೆಗಳು ಮತ್ತು ಗ್ರಾಮಸ್ಥರನ್ನು ಸಮ್ಮೇಳನದ ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳಲಾಗಿದೆ.

ದಿನವಿಡೀ ನಡೆಯುವ ಸಾಹಿತ್ಯ ಕಾರ್ಯಕ್ರಮಗಳಲ್ಲಿ ಸ್ವಾಗತ, ನಿರೂಪಣೆ, ಧನ್ಯವಾದ ಮತ್ತು ಅಧ್ಯಕ್ಷಾದಿ ವೇದಿಕೆಯ ಕಾರ್ಯಕ್ರಮಗಳನ್ನು ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರೇ ನಿರ್ವಹಿಸಲಿರುವರು ಎಂದು ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾದ ಹರಿಶ್ಚಂದ್ರ ಎಂ. ತಿಳಿಸಿದರು.

ಸ್ವಾಗತ ಸಮಿತಿಯಲ್ಲಿ ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ ಅಧ್ಯಕ್ಷರಾಗಿದ್ದು ಬಂಟ್ವಾಳ ತಾಲೂಕು ಶಿಕ್ಷಣ ಲಾಖೆಯ ಪೂರ್ಣ ಸಹಯೋಗವಿದೆ. ಉಪಾಧ್ಯಕ್ಷರಾಗಿ ನಿವೃತ್ತ ಮುಖ್ಯ ಶಿಕ್ಷಕ ಗಿರಿಯಪ್ಪ ಗೌಡ ಶಾಂತಿಲ, ಜೊತೆ ಕಾರ್ಯದರ್ಶಿಯಾಗಿ ಮಮತಾ ಪೆರ್ಲಾಪು ಇವರನ್ನೊಳಗೊಂಡಂತೆ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದೆ. ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರ ತರುವ ಯೋಜನೆಯನ್ನು ರೂಪಿಸಿದೆ ಎಂದು ಕೋಶಾಧಿಕಾರಿ ಮಾಧವ ರೈ ಭಂಡಸಾಲೆ ಹೇಳಿದರು.

ಸಾಹಿತ್ಯ ರಚನೆಗೆ ವಿಷಯಗಳನ್ನು ಉದ್ಘಾಟನಾ ಪೂರ್ವದಲ್ಲಿ ತಿಳಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ಆಸಕ್ತ ಪ್ರಕಾರಗಳಲ್ಲಿ ಸ್ವರಚನೆ ಮಾಡುವರು. ಉದ್ಘಾಟನಾ ಸಮಾರಂಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಭಾಗವಸಲಿದ್ದಾರೆ. ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜು ಕೊಡಿಯಾಲ ಬೈಲು ಮಂಗಳೂರು ಇಲ್ಲಿನ ಪ್ರಥಮ ಪಿ.ಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕಾರ್ತಿಕೇಯ ಆರ್ ಮಯ್ಯ ಸಮಾರೋಪ ಭಾಷಣ ನೀಡಲಿದ್ದಾರೆ.

ಮಕ್ಕಳ ಸಾಹಿತ್ಯಾದಿ ಕಲೆಗಳಲ್ಲಿ ಹೆಚ್ಚು ತೊಡಗಿಸಿ ಕೊಂಡಿರುವ ಶ್ರೀ ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರು ಇವರಿಗೆ ಬಂಟ್ವಾಳ ತಾಲೂಕು ಸಾಹಿತ್ಯ ತಾರೆ ಪ್ರಶಸ್ತಿ, ರಾಜೇಶ ವಿಟ್ಲ ಇವರಿಗೆ ತಾಲೂಕು ಮಟ್ಟದ ಬಾಲಬಂಧು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪೂರ್ವಾಹ್ನ ತಾಲೂಕು ಕ.ಸಾ.ಪ. ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ಧ್ವಜಾರೋಹಣ ಮಾಡುವರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಹರಿಶ್ಚಂದ್ರ ಎಂ ಕನ್ನಡ ಧ್ವಜಾರೋಣ ಮಾಡುವರು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ ಬಾಯಾರು ತಿಳಿಸಿದರು.

ಬಂಟ್ವಾಳ ತಾಲೂಕಿನ ತಮ್ಮ ಶಾಲೆಯಿಂದ ಭಾಗವಹಿಸುವ ಒಟ್ಟು ಮಕ್ಕಳ ಸಂಖ್ಯೆಯನ್ನು ಸಮ್ಮೇಳನಕ್ಕೆ ನಾಲ್ಕು ದಿನ ಮೊದಲು 9731444259 ಅಥವಾ 9741365132 ಸಂಖ್ಯೆಗೆ ಕರೆ ಅಥವಾ ಸಂದೇಶದ ಮೂಲಕ ತಿಳಿಸಬೇಕು ಎಂದು ತಾಲೂಕಿನ ಅನುದಾನಿತ, ಅನುದಾನ ರಹಿತ ಮತ್ತು ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಮುಖ್ಯಸ್ಥರನ್ನು ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಾಬು ಪೂಜಾರಿ ಕೆ. ವಿನಂತಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಕ್ಕಳ ಕಲಾ ಲೋಕದ ಪಾಧ್ಯಕ್ಷ ಶಿವರಾಮ ಭಟ್ ನೆಡ್ಲೆ, ಕಾರ್ಯದರ್ಶಿ ಪುಷ್ಪಾ ಎಚ್, ಸ್ವಾಗತ ಸಮಿತಿಯ ವಿದ್ಯಾಧರ ರೈ ಹಾಗೂ ಶರತ್ ಕುಮಾರ್ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *