ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಡಿಸೆಂಬರ್ 10ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9ರಿಂದ ಅನ್ನಪೂರ್ಣ ಸಭಾಭವನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನ ಮೊಗರ್ನಾಡು, ನರಿಕೊಂಬು ಇಲ್ಲಿ ನಡೆಯಲಿರುವುದು.
ಪೂಜಾ ಕಾರ್ಯಕ್ರಮದ ಬಳಿಕ 11 ಗಂಟೆಗೆ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶಂಬೂರ್ ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನ ಭಾಷಣಗಾರರಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ತುಳುವ ಬೊಳ್ಳಿ ದಯಾನಂದ ಜಿ ಕತ್ತಲ್ ಸಾರ್ ಆಗಮಿಸಲಿದ್ದು.
ಕಾರ್ಯಕ್ರಮದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಜನಜಾಗೃತಿ ವೇದಿಕೆ ಬಂಟ್ವಾಳದ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಕಾರಂತ್ ನರಿಕೊಂಬು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಯೋಜನಾಧಿಕಾರಿ ಸುಧಾ ಜೋಶಿ, ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ, ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ಅಧ್ಯಕ್ಷ ಲೀಡಿಯ ಪಿಂಟೋ ಮೊದಲಾದವರು ಉಪಸ್ಥಿತರಿರುವರು ಎಂದು ತುಂಬೆ ವಲಯ ಮೇಲ್ವಿಚಾರಕಿ ಮಮತಾ ತಿಳಿಸಿರುತ್ತಾರೆ.