
ಬೆಂಗಳೂರು : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ.
ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್‌ಗೆ ಉತ್ತರ ನೀಡದ ಕಾರಣ ಇವರಿಗೆ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದರು. ಇದಕ್ಕೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿತ್ತು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ಗೆ ಸರಿಯಾದ ಉತ್ತರ ಸಿಗದ ಕಾರಣದಿಂದ ಬಸನಗೌಡ ಪಾಟೀಲ್ ಯತ್ನಾಳ್‌ಉಚ್ಛಾಟನೆ ಮಾಡಿದೆ.
ಆದೇಶದೆಲ್ಲೇನಿದೆ?
ಫೆಬ್ರವರಿ 10, 2025 ರಂದು ನೀಡಲಾದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪುನರಾವರ್ತಿತ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿದೆ.ಆದ್ದರಿಂದ ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ.