ಬಂಟ್ವಾಳ: ಬಂಟ್ವಾಳ ತಾಲೂಕಿನ ಕೃಷಿ ಸಖಿಯರಿಗೆ ಎರಡು ದಿನಗಳ ಕಾಲ ಜೇನು ಸಾಕಣಿಕೆ ತರಬೇತಿ ಕಾರ್ಯಕ್ರಮವನ್ನು ತೋಟಗಾರಿಕೆ ಇಲಾಖೆ ಬಂಟ್ವಾಳ ಮತ್ತು ತಾಲೂಕು ಪಂಚಾಯತ್ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ ರೋಡಿನ ಎಸ್.ಜಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ದಿನೇಶ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರದೀಪ್ ಡಿಸೋಜ ಅವರು ಜೇನುನೊಣಗಳ ಮತ್ತು ಸಾಕಾಣಿಕೆ ಬಗ್ಗೆ ಮಾಹಿತಿಯನ್ನು ನೀಡಿದರು.
ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಮಂಜುನಾಥ್, ಸಂಪನ್ಮೂಲ ವ್ಯಕ್ತಿಗಳಾದ ಲಕ್ಷಣ್ ಗೌಡ ಮತ್ತು ರಾಧಕೃಷ್ಣ ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.