ಮೊಬೈಲ್‌ಗ‌ಳಿಗೆ ಅ.12ರಂದು ಬರಲಿದೆ “ಬೀಪ್‌ ಶಬ್ದ”

Share with

ಫೋನ್‌ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್‌ ಶಬ್ದದೊಂದಿಗೆ ಸಂದೇಶ ಫ್ಲಾಶ್‌ ಆಗಲಿದೆ.

ಬೆಂಗಳೂರು: ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ ನೀಡಲು ಮುಂದಾಗಿದ್ದು, ಅದರಿಂದ ರಾಜ್ಯದಲ್ಲಿ ಅ.12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆಯು ನಡೆಯಲಿದೆ.

ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ ಸೆಲ್‌ ಬ್ರಾಡ್‌ ಕಾಸ್ಟಿಂಗ್‌ ಮೂಲಕ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್‌ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್‌ ಶಬ್ದದೊಂದಿಗೆ ಸಂದೇಶ ಫ್ಲಾಶ್‌ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.


Share with

Leave a Reply

Your email address will not be published. Required fields are marked *