ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Share with

ಬೆಳ್ತಂಗಡಿ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಳದಂಗಡಿ ಸಮೀಪದ ಕುಬಲಾಜೆಯಲ್ಲಿ ಜ.18ರಂದು ನಡೆದಿದೆ.

ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ

ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಆತ್ಮಹತ್ಯೆಗೆ ಶರಣಾದವರು. ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *