ಜೆಸಿಬಿ ಸಾಗಿಸುತಿದ್ದ ಟಿಪ್ಪರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿ..!

Share with

ಟಿಪ್ಪರ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದೆ.

ಬೆಳ್ತಂಗಡಿ: ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಕೆಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಅ.21ರಂದು ಬೆಳಗ್ಗೆ ಬೆಳ್ತಂಗಡಿಯ ಗುರುವಾಯನಕೆರೆ ಬಳಿ ನಡೆದಿದೆ. ಇದರಿಂದ ಬಹಳಷ್ಟು ಹೊತ್ತು ಸಂಚಾರಕ್ಕೆ ತಡೆ ಉಂಟಾಗಿ ಉದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ.

ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಜೆಸಿಬಿ ಹೊತ್ತು ಸಾಗುತ್ತಿದ್ದ ಟಿಪ್ಪರ್ ಗೆ ಎದುರುಗಡೆಯಿಂದ ಬರುತಿದ್ದ ಟೆಂಪೋ ಟ್ರಾವೆಲರ್ ವಾಹನವು ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ವೇಳೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಾರಿಯ ಒಂದು ಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ ನಡೆದ ಸ್ಥಳದಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದು ವಾಹನಗಳು ಸುಮಾರು 1 ಗಂಟೆಗಿಂತಲೂ ಹೆಚ್ಚು ಹೊತ್ತು ಕಿಲೋ ಮೀಟರ್ ಗಟ್ಟಲೆ ಸಾಲು ಗಟ್ಟಿ ನಿಂತಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.


Share with

Leave a Reply

Your email address will not be published. Required fields are marked *