ಬೆಳ್ತಂಗಡಿ: ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ

Share with

ಬೆಳ್ತಂಗಡಿ: ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ಉಮಾ ಅಜಯ್ ಶೆಟ್ಟಿ (32), ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ಸೂರಜ್ ಶೆಟ್ಟಿ(23), ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ(30), ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಪರೆಕಲ್ ನಿವಾಸಿ
ಕಿಶೋರ್.ಟಿ (32) ಎಂಬವರೆಂದು‌ ಗುರುತಿಸಲಾಗಿದೆ.

ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನವೆಂಬರ್ 9ರಂದು ರಾತ್ರಿ 10 ಗಂಟೆ ಸಮಯಕ್ಕೆ ಇಸಾಕ್ ಎಂಬವರ ಅಕ್ಕನ ಮಗ ನೌಫಲ್ ಎಂಬವರು ತಮ್ಮ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ನೌಫಾಲ್ ನ ಗೆಳೆಯ ಸೈಪುದ್ದಿನ್ ಎಂಬಾತನ ಗೆಳೆಯರಾದ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿಯವರು ಬಾಡಿಗೆಗೆ ನೀಡುವಂತೆ ಕೇಳಿದಾಗ ನೀಡದೇ ಇದ್ದುದ್ದರಿಂದ ಸದ್ರಿ ಕಾರನ್ನು ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿ ಯವರು ಕಳವು ಮಾಡಿ ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು.
ಈ ಬಗ್ಗೆ ತನಿಖೆ ಕೈಗೊಂಡ ತಂಡ ನ.24ರಂದು ಕಳ್ಳತನವಾದ ಇನೋವಾ ಕಾರು ಸಮೇತ ಪ್ರಕರಣದ ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಇದೀಗ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ ಮುಂದಿನ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಿಷ್ಯಂತ್.ಸಿ.ಬಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಂ.ಎನ್ ರವರ ನಿರ್ದೇಶನದಂತೆ ಬಂಟ್ವಾಳ ಡಿ.ವೈಎಸ್.ಪಿ ಪ್ರತಾಪ್ ಸಿಂಗ್ ಥೋರಾಟ್ ರವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸೆಕ್ಟರ್ ಅನೀಲ್ ಕುಮಾರ್.ಡಿ ಮತ್ತು ಸಬ್ ಇಸ್ಪೆಕ್ಟರ್ ಸಮರ್ಥ ರವೀಂದ್ರ ಗಾಣಿಗೇರ ಹಾಗೂ ಸಿಬ್ಬಂದಿ ಎ.ಎಸ್.ಐ ಗಳಾದ ಸಾಮ್ಯುವೆಲ್ ಮತ್ತು ಪೌಲೋಸ್ ಹಾಗೂ ಸಿಬ್ಬಂದಿ ರಾಜೇಶ್.ಎನ್, ಪ್ರಶಾಂತ್, ಮಂಜುನಾಥ್, ಮಲ್ಲಿಕಾರ್ಜುನ್ ಎಂಬವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Share with

Leave a Reply

Your email address will not be published. Required fields are marked *