ಬೆಳ್ತಂಗಡಿಯ ವಿದ್ಯಾರ್ಥಿಗೆ ಪುತ್ತೂರಿನಲ್ಲಿ ಹಲ್ಲೆ: ಕೇಸ್ ದಾಖಲು

Share with

ಬೆಳ್ತಂಗಡಿ: ಬೆಳ್ತಂಗಡಿಯ ವಿದ್ಯಾರ್ಥಿಯೋರ್ವನಿಗೆ ಹಲ್ಲೆ ನಡೆಸಿದ ಆರೋಪದಡಿ ಪುತ್ತೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಘಟನೆಯ ವಿವರ: ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವರು ಪುತ್ತೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿಯಾಗಿದ್ದಾರೆ.

ಏ.22ರಂದು ಸಂಜೆ ಕಾಲೇಜಿನಿಂದ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ಎಂಬವರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ಅವರು ಚಹಾ ಕುಡಿಯುತ್ತಿರುವಾಗ ಅವರ ಪರಿಚಯದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇತರ 5 ಜನ ಬಂದು ಹಲ್ಲೆ ನಡೆಸಿದ್ದಾರೆ. ಆಗ ಆದಿಲ್ ಹುಸೈನ್ ಅವರ ಜೊತೆಯಲ್ಲಿದ್ದ ಸ್ನೇಹಿತರು ಹಲ್ಲೆಯ ಬಗ್ಗೆ ಪ್ರಶ್ನಿಸಿದಾಗ ಅವರಿಗೂ ಅರೋಪಿಗಳು ಬೆದರಿಕೆ ಒಡ್ಡಿದ್ದಾರೆ.

ಅಲ್ಲಿದ್ದ ಸಾರ್ವಜನಿಕರು ಗಲಾಟೆಯನ್ನು ಬಿಡಿಸಲು ಬಂದಾಗ ಆರೋಪಿಗಳು ಆದಿಲ್ ಅವರಿಗೆ ಅವ್ಯಾಚವಾಗಿ ಬೈದು ಜೀವ ಬೆದರಿಕೆ ಒಡ್ಡಿ ಸ್ಥಳದಿಂದ ತೆರಳಿದ್ದಾರೆ. ಹಲ್ಲೆಯಿಂದಾದ ಗಾಯಕ್ಕೆ ಆದಿಲ್ ಅವರು ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕೆಲವು ತಿಂಗಳ ಹಿಂದೆ ಕಾಲೇಜಿನ ವಿದ್ಯಾರ್ಥಿಗಳಿಗೆ ಆರೋಪಿ ಮೊಯಿನುದ್ದೀನ್ ಮತ್ತು ಇತರರು ಹೊಡೆಯುತ್ತಿರುವಾಗ ಗಲಾಟೆಯನ್ನು ಆದಿಲ್ ಬಿಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಪುತ್ತೂರು ನಗರ . : 49/2026, ៩: 189(2), 191(2), 191(3), 352,115(2), 118(1),351(2), ಜೊತೆಗೆ 190 ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *