ದಕ್ಷಿಣ ಕನ್ನಡ : ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಪುರುಷಗಡ್ಡೆಯಲ್ಲಿ ನಡೆದಿದೆ.
ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಮೃತರನ್ನು ಪ್ರಶಾಂತ್ ಹಾಗೂ ಬೆಳ್ಮನೆ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.