ವಿರಾಟ್ ಕೊಹ್ಲಿಯ ದಾಖಲೆ ಮುರಿದ ಬೆನ್ ಸ್ಟೋಕ್ಸ್

Share with

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಇನಿಂಗ್ಸ್ ಮತ್ತು 114 ರನ್ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 241 ರನ್ಗಳ ಗೆಲುವು ದಾಖಲಿಸಿತ್ತು. ಹಾಗೆಯೇ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 10 ವಿಕೆಟ್ಗಳ ಅಮೋಘ ಜಯ ಸಾಧಿಸಿದೆ.

ಈ ಗೆಲುವುಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ 2ನೇ ನಾಯಕ ಎಂಬ ಹೆಗ್ಗಳಿಕೆಗೆ ಬೆನ್ ಸ್ಟೋಕ್ಸ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು ಎಂಬುದು ವಿಶೇಷ.

ಭಾರತ ತಂಡವು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಒಟ್ಟು 22 ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ 14 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಹಾಗೆಯೇ 1 ಮ್ಯಾಚ್ ಅನ್ನು ಡ್ರಾ ಮಾಡಿಕೊಂಡರೆ, 7 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಈ ಹದಿನಾಲ್ಕು ಗೆಲುವುಗಳೊಂದಿಗೆ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ 2ನೇ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದರು.


Share with

Leave a Reply

Your email address will not be published. Required fields are marked *