ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ, ಬೆಂಗಳೂರಿನ ಎಲ್ಲಾ ಕ್ಯಾಬ್ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್ ಅಂಟಿಸಲು ಸೂಚನೆ

Share with

ಬೆಂಗಳೂರು, ನವೆಂಬರ್ 20: ಬೆಂಗಳೂರಿನ ಕ್ಯಾಬ್(Cab)ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಪೊಲೀಸರು ಹೊಸ ಸುರಕ್ಷತಾ ಕ್ರಮವನ್ನು ಪರಿಚಯಿಸಿದ್ದಾರೆ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಕ್ಯಾಬ್ಗಳಲ್ಲಿ 112 ತುರ್ತು ಸಹಾಯವಾಣಿ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಮೊಬೈಲ್ ಅಪ್ಲಿಕೇಷನ್ ಬಗ್ಗೆ ಮಾಹಿತಿಯನ್ನು ಹೊಂದಿರುವ ಸ್ಟಿಕ್ಕರ್ಗಳನ್ನು ಅಂಟಿಸಬೇಕೆಂದು ಪೊಲೀಸರು ಸೂಚನೆ ನೀಡಿದ್ದಾರೆ.

ಸಾರ್ವಜನಿಕರ ಸುರಕ್ಷತೆಯನ್ನು ಸುಧಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮಹಿಳಾ ಪ್ರಯಾಣಿಕರ ಮೇಲೆ ಹೆಚ್ಚಿನ ಗಮನಹರಿಸಲಾಗಿದೆ. ಡೆಕ್ಕನ್ ಹೆರಾಲ್ಡ್ ಈ ಕುರಿತು ವರದಿ ಪ್ರಕಟ ಮಾಡಿದ್ದು, ಸ್ಪಷ್ಟವಾಗಿ ಗೋಚರಿಸುವ ಸಹಾಯವಾಣಿ ವಿವರಗಳು ಅಪರಾಧವನ್ನು ತಡೆಯಲು ಮತ್ತು ಸಂಚಾರ ನಿರ್ವಹಣೆಗೆ ಸಹಾಯ ಮಾಡಬಹುದು ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ತಿಳಿಸಿದ್ದಾರೆ.

ವರದಿಯ ಪ್ರಕಾರ, ಕ್ಯಾಬ್ ನಿರ್ವಾಹಕರು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಮುದ್ರಿತವಾದ ಸ್ಟಿಕ್ಕರ್ಗಳನ್ನು ತಮ್ಮ ವಾಹನಗಳ ಎರಡು ಬದಿಗಳಲ್ಲಿ ಅಂಟಿಸುವಂತೆ ಸೂಚನೆ ನೀಡಿದ್ದಾರೆ. ಹೊಸ ಆದೇಶದಲ್ಲಿ 12,000 ಕ್ಕೂ ಹೆಚ್ಚು ಕ್ಯಾಬ್‌ಗಳನ್ನು ಈಗಾಗಲೇ ಶಾರ್ಟ್ ಲಿಸ್ಟ್ ಮಾಡಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಉಳಿದ ಎಲ್ಲಾ ವಾಹನಗಳು ಅನುಮೋದಿತ ಸ್ಟಿಕ್ಕರ್‌ಗಳನ್ನು ಅಳವಡಿಸಲು ದೃಢವಾದ ಗಡುವನ್ನು ಸಹ ನಿಗದಿಪಡಿಸಲಾಗಿದೆ.


Share with

Leave a Reply

Your email address will not be published. Required fields are marked *