ಬೆಂಗಳೂರು: ಫೆ.12ರಿಂದ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭ ಆಗಲಿದೆ.
ಫೆ.12ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣವನ್ನು ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಫೆಬ್ರವರಿ 23ರವರೆಗೂ ಅಧಿವೇಶನ ನಡೆಯಲಿದೆ.
ಆಡಳಿತ ಮತ್ತು ಪ್ರತಿಪಕ್ಷದ ನಡುವೆ ಈಗಾಗಲೇ ಸಾಕಷ್ಟು ಆರೋಪ-ಪ್ರತ್ಯಾರೋಪಗಳು ನಡೆಯುತ್ತಿದ್ದು, ಆರೋಪ-ಪ್ರತ್ಯಾರೋಪಕ್ಕೆ ಆಡಳಿತ ಮತ್ತು ಪ್ರತಿಪಕ್ಷಗಳು ಸಜ್ಜಾಗಿವೆ. ಅಧಿವೇಶನದಲ್ಲಿ ಭಾರಿ ವಾಗ್ವಾದ ನಡೆಯುವ ಲಕ್ಷಣ ಕಾಣುತ್ತಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಜನರ ನಿರೀಕ್ಷೆಯೂ ಬಜೆಟ್ ಅಧಿವೇಶನದ ಮೇಲೆ ಹೆಚ್ಚಿದೆ. ಇತ್ತೀಚಿಗಷ್ಟೆ ಕೇಂದ್ರದ ಬಜೆಟ್ ಮಂಡನೆಯಾಗಿತ್ತು.