ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನಗಳ ಕಾಲ ನಡೆದ ರಾಜ-ಮಹಾರಾಜ ಜೋಡುಕರೆ ಕಂಬಳವು ಸಂಪನ್ನಗೊಂಡಿದ್ದು ಕಂಬಳ ಕೂಟವನ್ನು ಲಕ್ಷಾಂತರ ಜನರು ವೀಕ್ಷಿಸಿದರು. ಬೆಂಗಳೂರು ಕಂಬಳದಲ್ಲಿ ಒಟ್ಟು 159 ಜೋಡಿ ಕೋಣಗಳು ಸ್ಪರ್ಧಿಸಿದ್ದು ಇದರ ಫಲಿತಾಂಶ ಹೀಗಿದೆ.
ಬೆಂಗಳೂರು ಕಂಬಳ 2023 ಫಲಿತಾಂಶ
ಕನೆಹಲಗೆ: 6.5 ಕೋಲು ನಿಶಾನೆಗೆ ನೀರು ಹಾಯಿಸಿದ ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ “ಬಿ”
ಹಲಗೆ ಮೆಟ್ಟಿದವರು: ಉಲ್ಲೂರು ಕಂದಾವರ ಗಣೇಶ್
ಅಡ್ಡ ಹಲಗೆ:
ಪ್ರಥಮ: ಎಸ್.ಎಮ್.ಎಸ್ ಫ್ಯಾಮಿಲಿ ಬೆಂಗಳೂರು
ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ”
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್
ಹಗ್ಗ ಕಿರಿಯ:
ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ”
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್
ನೇಗಿಲು ಹಿರಿಯ:
ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ
ಓಡಿಸಿದವರು: ಸರಪಾಡಿ ಧನಂಜಯ ಗೌಡ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಪಟ್ಟೆ ಗುರುಚರಣ್
ನೇಗಿಲು ಕಿರಿಯ:
ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ
ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ಒಟ್ಟು 159 ಜೋಡಿ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ ಏಳು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಆರು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 21 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 32 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 31 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 62 ಜೊತೆ ಕೋಣಗಳಿದ್ದವು.