ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರ ಭೇಟಿ

Share with

ಎಸ್.ಡಿ.ಎಂ. ಬೆಳ್ತಂಗಡಿಯ ಕಬ್ಸ್ ಬುಲ್ ಬುಲ್ಸ್ , ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು.

ಬೆಳ್ತಂಗಡಿ: ಸ್ಕೌಟ್ಸ್ ಮತ್ತು ಗೈಡ್ಸ್, ಜೀವನದಲ್ಲಿ ಯಾವ ರೀತಿ ನಾವು ನಾಯಕತ್ವವನ್ನು ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ಯಾವ ರೀತಿ ರೂಪಿಸಬೇಕು ಎಂಬುದರ ರೂಪುರೇಷೆಯನ್ನು ನೀಡುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.

ಅವರು ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿದರು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಒಡನಾಟ, ಅವರ ನೇತೃತ್ವದಲ್ಲಿ ಮದ್ಯ ವರ್ಜನ ಶಿಬಿರವು ನೇತೃತ್ವದಲ್ಲಿ ನಡೆಯುತ್ತಿರುವುದರ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು . ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಬಗ್ಗೆ ಅಪಾರ ಗೌರವ ಹೊಂದಿರುವ ಪಿ.ಜಿ.ಆರ್.ಸಿಂಧ್ಯಾ ರವರು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರು ಬೆಳ್ತಂಗಡಿಯಲ್ಲಿ ಸ್ಕೌಟ್ ಗೈಡ್ ಭವನ ನಿರ್ಮಾಣಕ್ಕಾಗಿ ಶ್ರಮಪಡುತ್ತಿರುವುದನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಅವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಎಸ್.ಡಿ.ಎಂ. ಬೆಳ್ತಂಗಡಿಯ ಕಬ್ಸ್ ಬುಲ್ ಬುಲ್ಸ್ , ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹುಟ್ಟು ಹಬ್ಬದ ಶುಭ ಹಾರೈಕೆಯ ಹಾಡಿನೊಂದಿಗೆ ರಾಜ್ಯ ಮುಖ್ಯ ಆಯುಕ್ತರನ್ನು ಬರಮಾಡಿಕೊಂಡರು, ಹಾಗೂ ಮಕ್ಕಳೇ ತಯಾರಿಸಿದ ಹೂವಿನ ಬೊಕ್ಕೆ ಹಾಗೂ ಗ್ರೀಟಿಂಗ್ ಕಾಡ್೯ನ್ನು ಸಿಂಧ್ಯಾ ಅವರಿಗೆ ನೀಡಿದರು.

ಬಳಿಕ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಪರವಾಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತರಾದ (ADC) ಬಿ.ಸೋಮಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸಿಂಧ್ಯಾ ಅವರನ್ನು ಗೌರವಿಸಿ ಅಭಿನಂದಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಪದ್ಮ ಕುಮಾರ್ ಸ್ಥಳೀಯ ಸಂಸ್ಥೆಯ ಪರವಾಗಿ ಅಭಿನಂದಿಸಿ ಗೌರವಿಸಿದರು.

ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ ಭಟ್ ರವರು ಉಪಸ್ಥಿತರಿದ್ದರು. ಸ್ಥಳೀಯ ಸಂಸ್ಥೆ ಕಾರ್ಯದರ್ಶಿ, ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ ಪ್ರಮೀಳ ಸ್ವಾಗತಿಸಿ ಕಾರ್ಯಕ್ರಮವನ್ನು ಸಂಘಟಿಸಿದ್ದರು. ಮಕ್ಕಳ ಪೋಷಕರು , ಕಬ್ಸ್ ಬುಲ್ ಬುಲ್ಸ್ ಸ್ಕೌಟ್ ಗೈಡ್ ವಿದ್ಯಾರ್ಥಿಗಳು, ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *